ಮಂಜೇಶ್ವರ: "ಎತ್ತಣ ಮಾಮರ,ಎತ್ತಣ ಕೋಗಿಲೆ...ಎತ್ತಣದೆತ್ತಣ ಸಂಬಂಧವಯ್ಯ...." ಈ ಮಾತಿಗೆ ಅನ್ವರ್ಥರಾದವರು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ರಂಗದ ಧುರೀಣರಾದ ತುಳು ಸಂಘಟಕರಾದ ಶ್ರೀ ಸರ್ವೋತ್ತಮ ಶೆಟ್ಟಿ ಅಬುದಾಬಿ. ಮೂಲತಃ ಉಡುಪಿ ಜಿಲ್ಲೆಯವರಾದ ಸರ್ವೋತ್ತಮ ಶೆಟ್ಟಿ ಕೊಲ್ಲಿ ರಾಷ್ಟ್ರದಲ್ಲಿದ್ದುಕೊಂಡು ತನ್ನ ತಾಯ್ನಾಡಿನ ಜನತೆಗಾಗಿ ಕೈ ಮಿಗಿಲಾದ ಸ್ಪಂದನೆ ನೀಡುವಂತಹ ಮಹಾನುಭಾವ.
ಇಂದು ಇವರ ಸೇವಾರ್ಥವಾಗಿ ಮಂಜೇಶ್ವರದಲ್ಲಿ ಸ್ಕಂದ ಹೆಲ್ಪ್ ಡೆಸ್ಕ್ ಹಾಗೂ ವಜ್ರಿ ಟೆಕ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಸಂಸ್ಥೆ ಕರೊನಾ ಹಿನ್ನೆಲೆಯಲ್ಲಿ ನೀಡುತ್ತಿರುವ "ಹಸಿವು ಹರಸಿದ ಹಸ್ತಗಳು" ಎಂಬ ಇಪ್ಪತ್ತ ನಾಲ್ಕನೇ ದಿನದ ಮಧ್ಯಾಹ್ನದ ಬಿಸಿ ಊಟ ವಿತರಣೆ ನಡೆಯಿತು.
ಕೇರಳ - ಕರ್ನಾಟಕ ಗಡಿ ಪ್ರದೇಶವಾದ ತಲಪಾಡಿ ಕೆಳಗಿನ ಚೆಕ್ಕಿಂಗ್ ಸೆಂಟರ್ ಹಾಗೂ ಮೇಲಿನ ಚೆಕ್ಕಿಂಗ್ ಸೆಂಟರ್ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಂಜೇಶ್ವರ ಪೊಲೀಸ್ ಠಾಣೆಯ ಅಧಿಕಾರಿಗಳಾದ ಗಿರೀಶ್ ರಿಗೆ ಸ್ಕಂದ ಹೆಲ್ಪ್ ಡೆಸ್ಕ್ ನ ಸಂಸ್ಥಾಪಕರಾದ ರತನ್ ಕುಮಾರ್ ಹೊಸಂಗಡಿ ಹಾಗೂ ಸುಖೇಶ್ ಬೆಜ್ಜ ವಿತರಿಸುವ ಮೂಲಕ ಉದ್ಘಾಟಿಸಿದರು.
ಬಳಿಕ ತಲಪಾಡಿಯಿಂದ ತೊಡಗಿ ಬಂದ್ಯೋಡ್ ತನಕ ಕರ್ತವ್ಯ ನಿರತ ಪೊಲೀಸ್ ಇಲಾಖಾ ಅಧಿಕಾರಿಗಳಿಗೆ, ಸಿಬ್ಬಂದಿ ವರ್ಗದವರಿಗೆ, ಆರೋಗ್ಯಾಧಿಕಾರಿಗಳಿಗೆ ಹಾಗೂ ವಿವಿಧ ರಾಜ್ಯಗಳಿಂದ ಕೇರಳ - ಕರ್ನಾಟಕ ಪ್ರವೇಶಿಸುವ ನಡುವೆ ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಿಲುಕಿರುವ ಲಾರಿ ಚಾಲಕ ಕ್ಲಿನರ್ ಗಳಿಗೆ, ಅಸೌಖ್ಯ ಪೀಡಿತ ವೃದ್ಧರಿಗೆ, ಭಿಕ್ಷುಕರಿಗೆ ನೀಡಲಾಯಿತು.
ಈ ಬಿಸಿ ಊಟ ವಿತರಣೆಯಲ್ಲಿ ಸ್ಕಂದ ಹೆಲ್ಪ್ ಡೆಸ್ಕ್ ನ ಪಧಾಧಿಕಾರಿಗಳಾದ ಲಕ್ಷ್ಮಣ್ ಭಕ್ತ ಮಂಜೇಶ್ವರ, ದೀಪಕ್ ರಾಜ್ ಉಪ್ಪಳ ಮೊದಲಾದವರು ಉಪಸ್ಥಿತರಿದ್ದರು.






0 Comments