ಕಾಸರಗೋಡು: ಹೊನ್ನೆಮೂಲೆ ಶ್ರೀಚೆನ್ನಮಲ್ಲಿಕಾರ್ಜುನ ಕ್ಷೇತ್ರ ನಿರ್ಮಾಣಕ್ಕೆ ಧರ್ಮಸ್ಥಳದ ಕ್ಷೇತ್ರದಿಂದ 5 ಲಕ್ಷ ರೂ. ವಿತರಿಸಿದರು. ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರು ಶ್ರೀಚೆನ್ನಮಲ್ಲಿಕಾರ್ಜುನ ಕ್ಷೇತ್ರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳಿಗೆ ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಗೋಪಾಲ, ಕಾರ್ಯಧ್ಯಕ್ಷ ಧಾರ್ಮಿಕ ಮುಂದಾಳು ಕೆ.ಎನ್.ವೆಂಕಟ್ರಮಣ ಹೊಳ್ಳ ಕಾಸರಗೋಡು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ , ನಿರಂಜನ ಕೊರಕ್ಕೋಡು, ಜೀರ್ಣೋದ್ಧಾರ ಕಾರ್ಯದರ್ಶಿ ರೋಹಿತಾಕ್ಷ ನಾಗರಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿ ಪ್ರಮಾಣವಚನ ಸ್ವೀಕರಿಸಿದ ಡಾ.ವೀರೇಂದ್ರ ಹೆಗ್ಗಡೆಯವರನ್ನು ಸಮಿತಿಗಳ ಪರವಾಗಿ ಕೆ.ಎನ್.ವೆಂಕಟ್ರಮಣ ಹೊಳ್ಳ ಶಾಲು ಹೊದಿಸಿ ಅಭಿನಂದಿಸಿದರು.
ಜಾಹೀರಾತು




0 Comments