ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ವಿಧಿವಶ

 


 ಬೆಂಗಳೂರು :  ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಇಂದು ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಹೃದಯಾಘಾತದಿಂದ ದ್ವಾರಕೀಶ್ ಸಾವನ್ನಪ್ಪಿದರೆಂದು ವರದಿಗಳಾಗಿವೆ. 1963ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ದ್ವಾರಕೀಶ್ ಹಲವು ಸೂಪರ್ ಹಿಟ್ ಚತ್ರಗಳಲ್ಲಿ ನಟಿಸಿದ್ದರು. ಅಲ್ಲದೆ ಚಿತ್ರಗಳ ನಿರ್ಮಾಪಕರಾಗಿ ಬಂಡವಾಳವನ್ನೂ ಹೂಡಿದ್ದರು. 81 ವಯಸ್ಸಾಗಿದ್ದ ದ್ವಾರಕೀಶ್ ಎಲೆಕ್ಟ್ರಾನ್ ಸಿಟಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅಲ್ಲೇ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಕನ್ನಡದ ಸುಪ್ರಸಿದ್ಧ ನಟರುಗಳಾದ ಡಾ ರಾಜ್ ಕುಮಾರ್, ವಿಷ್ಣುವರ್ಧನ್ ರಂತಹವರೊಂದಿಗೆ ದ್ವಾರಕೀಶ್ ನಟಿಸಿದ್ದಾರೆ. ಕೊನೆಯದಾಗಿ ಅವರು ಚೌಕ ಸಿನೆಮಾದಲ್ಲಿ ನಟಿಸಿದ್ದರು.



1963ರಲ್ಲಿ ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್‌ ಪಾದಾರ್ಪಣೆ ಮಾಡಿದರು. ಹಲವಾರು ಸೂಪರ್‌ ಹಿಟ್‌ ಸಿನಿಮಾಗಳಿಗೆ ಬಂಡವಾಳ ಹಾಕುವುದರ ಜೊತೆಗೆ ನಟಿಸಿ ಸೈ ಎನಿಸಿಕೊಂಡಿದ್ದರು. ಕಳಚಿತು ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ. ಇನ್ನೂ ದ್ವಾರಕೀಶ್‌ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ  ಮಿಡಿದಿದ್ದಾರೆ. 1966ರಲ್ಲಿ ಮೇಯರ್‌ ಮುತ್ತಣ್ಣ ಸಿನಿಮಾ ನಿರ್ದೇಶನ ಕೂಡ ಮಾಡಿದ್ದರು.

Post a Comment

0 Comments