ಪೆರ್ಲ: ಗಾಂಧೀ ಜಯಂತಿ, ಸ್ವಚ್ಛತಾ ಹಿ ಸೇವಾ ಸಪ್ತಾಹದ ಅಂಗವಾಗಿ ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಹಾಗೂ ನಾಲಂದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪೆರ್ಲ ಪೇಟೆಯನ್ನು ಶುಚಿಗೊಳಿಸಲಾಯಿತು. ಗ್ರಾಪಂ ಅಧ್ಯಕ್ಷ ಸೋಮಶೇಖರ್ ಜೆ.ಎಸ್. ಉದ್ಘಾಟಿಸಿದರು.ಉಪಾಧ್ಯಕ್ಷೆ ರಮ್ಲ ಅಧ್ಯಕ್ಷತೆ ವಹಿಸಿದ್ದರು. ಅಬಿವೃದ್ದಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್.ಗಾಂಭೀರ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಶ್ರೀ ಕುಲಾಲ್, ವಾರ್ಡ್ ಸದಸ್ಯೆ ಉಷಾ, ಸಹಾಯಕ ಕಾರ್ಯದರ್ಶಿ ಗಿರೀಶ್ ಸಿ., ನಾಲಂದ ಕಾಲೇಜು ಪ್ರಿನ್ಸಿಪಾಲ್ ಶಂಕರ ಖಂಡಿಗೆ, ಸ್ವಯಂ ಸೇವಕರು ಉಪಸ್ಥಿತರಿದ್ದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ.ಸಂಯೋಜಿಸಿದರು.


0 Comments