ಎಡನೀರು ಶ್ರೀಗಳ ಅಡ್ಡಗಟ್ಟಿ ಕಾರು ಹಾನಿ ಪ್ರಕರಣ ತ್ವರಿತ ತನಿಖೆಗೆ ಎಣ್ಮಕಜೆ ಪಂ.ಅಧ್ಯಕ್ಷರ ಆಗ್ರಹ


 ಪೆರ್ಲ ; ಎಡನೀರು ಸಂಸ್ಥಾನದ ಶ್ರೀ ಸಚ್ಛಿದಾನಂದ ಭಾರತೀ ತೀರ್ಥ ಸ್ವಾಮೀಜಿಗಳು ಸಂಚರಿಸುತ್ತಿದ್ದ ಕಾರನ್ನು ಸಮಾಜಘಾತುಕ ಶಕ್ತಿಗಳು ಅಡ್ಡಗಟ್ಟಿ ಹಾನಿಗೊಳಿಸಿರುವುದನ್ನು ಡಿಸಿಸಿ ಪ್ರಧಾನ ಕಾರ್ಯದರ್ಶಿಯೂ ಎಣ್ಮಕಜೆ ಗ್ರಾ.ಪಂ.ಅಧ್ಯಕ್ಷರಾದ ಸೋಮಶೇಖರ್ ಜೆ.ಎಸ್. ತೀವ್ರವಾಗಿ ಖಂಡಿಸಿದ್ದಾರೆ. 

ಸ್ವಾಮೀಜಿ ಮೇಲಿನ ಹಲ್ಲೆ ಯತ್ನ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜತೆಗೆ ಎಡನೀರು ಶ್ರೀಗಳಿಗೆ ಸೂಕ್ತ ಭದ್ರತೆಯನ್ನು ಪೊಲೀಸ್ ಕಡೆಯಿಂದ ಕಲ್ಪಿಸಬೇಕೆಂದು ಅವರು ಸಂಬಂಧಪಟ್ಟವರನ್ನು ಆಗ್ರಹಿಸಿದ್ದಾರೆ.

Post a Comment

0 Comments