ಪೆರ್ಲ : ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಪೆರ್ಲ ಇದರ 48ನೇ ವಾರ್ಷಿಕೋತ್ಸವ (ಒಂದು ಮಂಡಲ ಪೂರ್ಣ) ಅಂಗವಾಗಿ ಪೆರ್ಲದ ಮಣ್ಣಿನಲ್ಲಿ ಪ್ರಪ್ರಥಮ ಬಾರಿಗೆ ಶ್ರೀ ಅಯ್ಯಪ್ಪ ತಿರುವಿಳಕ್ಕ್ ಉತ್ಸವ ಹಾಗೂ ಶ್ರೀ ಧರ್ಮಶಾಸ್ತ ಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯನ್ನು ಉಕ್ಕಿನಡ್ಕ ಶ್ರೀ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷರಾದ ಡಾ| ಶ್ರೀ ಜಯಗೋವಿಂದ ಉಕ್ಕಿನಡ್ಕ ಅವರು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಚಂದ್ರಶೇಖರ ಆಚಾರ್ಯ, ಉತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಶ್ರೀಧರ ಗುರುಸ್ವಾಮಿ, ಮಂದಿರ ಸಮಿತಿ ಅಧ್ಯಕ್ಷರಾದ ಶ್ರೀ ಉದಯ ಚೆಟ್ಟಿಯಾರ್ ಬಜಕೂಡ್ಲು, ಸಮಿತಿ ಪದಾಧಿಕಾರಿಗಳು ಹಾಗೂ ಮತ್ತಿತರರು ಇದೇ ವೇಳೆ ಉಪಸ್ಥಿತರಿದ್ದರು.
ಡಿಸೆಂಬರ್ 3, 4, 5ರಂದು ಮೂರು ದಿನಗಳ ಕಾಲ ಬಹು ವಿಜೃಂಭಣೆಯಿಂದ ಜರುಗಲಿದೆ ಎಂದು ಸಮಿತಿಯವರು ತಿಳಿಸಿದರು.


0 Comments