ಪೆರ್ಲ : ಅಂಗಡಿಮೊಗರು ಸಮೀಪದ ದೇಲಂಪಾಡಿ ಶ್ರೀ ಮಹಾಲಿಂಗೇಶ್ವರ ಕ್ಷೇತ್ರಕ್ಕೆ ಸೇವಾ ರೂಪದಲ್ಲಿ ಸಮರ್ಪಣೆಯಾದ ಶಿಲಾ ದೀಪಸ್ತಂಭವನ್ನು ಕ್ಷೇತ್ರ ತಂತ್ರಿವರ್ಯರಾದ ದೇಲಂಪಾಡಿ ಗಣೇಶ ತಂತ್ರಿಗಳು ಲೋಕಾರ್ಪಣೆ ಗೊಳಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನಗೈದರು.ಸೇವಾ ಸಮಿತಿ ಅಧ್ಯಕ್ಷ ಡಿ.ದಾಮೋದರನ್ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ ದೀಪವನ್ನು ಸಮರ್ಪಿಸಿದ ಪುತ್ತಿಗೆ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀರಾಮ ಅಡಿಗಳು ಮತ್ತು ಶಿಲ್ಪಿ ತ್ಯಾಗರಾಜ ಆಚಾರ್ಯ ಬೆದ್ರಂಪಳ್ಳ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಧರ್ಮತ್ತಡ್ಕ ಶ್ರೀದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲಾ ಪ್ರಾಂಶುಪಾಲ ರಾಮಚಂದ್ರ ಭಟ್,ಉದ್ಯಮಿ ನವೀನ್ ಶೆಟ್ಟಿ ಮಂಗಳೂರು, ಪುತ್ತಿಗೆ ಗ್ರಾ.ಪಂ ಅಧ್ಯಕ್ಷ ಡ.ಸುಬ್ಬಣ್ಣ ಆಳ್ವ ಮೊದಲಾದವರು ಉಪಸ್ಥಿತರಿದ್ದರು. ಜೀರ್ಣೋದ್ಧಾರ ಡಿ.ರಾಜೇಂದ್ರ ರೈ ಸ್ವಾಗತಿಸಿ ನಿರೂಪಿಸಿದರು.



0 Comments